ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ 23 ನೇ ವಾರ್ಷಿಕ ಕ್ರೀಡೋತ್ಸವವು ಫೆಬ್ರವರಿ-೭ ರಂದು ಎ.ಎಲ್.ಎನ್ ರಾವ್ ಕ್ರೀಡಾಂಗಣದಲ್ಲಿ ಜರಗಿತು.
ಕ್ರೀಡೋತ್ಸವವನ್ನು ಉದ್ಘಾಟಿಸಿದ ಡಾ. ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು, ಅಜ್ಜರಕಾಡು ಉಡುಪಿ ಇಲ್ಲಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಇವರು ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಕ್ರೀಡಾಸಕ್ತಿಯಿಂದ ದೂರ ಉಳಿಯುವುದಕ್ಕೆ ಖೇದವನ್ನು ವ್ಯಕ್ತಪಡಿಸಿ ಮಾನಸಿಕ ದೈಹಿಕ ಒತ್ತಡಗಳನ್ನು ಸಂಪೂರ್ಣ ಪರಿಹರಿಸುವ ಕ್ರೀಡಾಕ್ಷೇತ್ರದಲ್ಲಿ ಹೆಚ್ಚಿನ ಒಲವನ್ನು ತೋರಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದರು.
ಕಾಲೇಜಿನ ಪ್ರಾಚಾರ್ಯರಾದ ಡಾ. ಮಧುಸೂದನ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ವಿದ್ಯಾರ್ಥಿ ಅಭಿಷೇಕ್ ನಾರ್ವೇಕರ್ ಧನ್ಯವಾದವಿತ್ತರು. ವಿದ್ಯಾರ್ಥಿ ಶರತ್ ಕುಮಾರ್ ಕ್ರೀಡಾ ಸಂಹಿತೆಯನ್ನು ಬೋಧಿಸಿದರು. ವಿದ್ಯಾರ್ಥಿ ಅಭಿಷೇಕ್ ಕಾಶ್ಯಪ್ ಕಾರ್ಯಕ್ರಮ ನಿರ್ವಹಿಸಿದರು.