ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಆಗಸ್ಟ್ 16ರಂದು ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜರಗಿತು.
ಲೈಫ್ ಸ್ಕಿಲ್ ಟ್ರೈನರ್ ಶ್ರೀ ಚಂದನ್ ರಾವ್ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಅಂತಿಮ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಸಂದರ್ಶನ ಎದುರಿಸುವ ಕುರಿತಾದ ಸಂದರ್ಶನ ಸಂವಹನ ಕಲೆ
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಲೈಫ್ ಸ್ಕಿಲ್ ಟ್ರೈನರ್ ಶ್ರೀ ಚಂದನ್ ರಾವ್ ವಿದ್ಯಾರ್ಥಿಗಳಿಗೆ ವಿವಿಧ ಉದಾಹರಣೆ ಮತ್ತು ಚಟುವಟಿಕೆಗಳನ್ನೊಳಗೊಂಡ ತರಬೇತಿ ಶಿಬಿರವನ್ನು ನಡೆಸಿಕೊಟ್ಟು, ಸಂದರ್ಶನ ಎದುರಿಸುವ ಮತ್ತು ಜಯಶೀಲರಾಗುವ ಹಲವು ಕೌಶಲಗಳನ್ನು ತಿಳಿಸಿ ಪ್ರಾತ್ಯಕ್ಷಿಕೆ ನೀಡಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷರಾಗಿದ್ದರು.
ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಶ್ರೀ ಹರಿಕೇಶವ್ ವಂದಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ರಾಘವೇಂದ್ರ ಜಿ ಜಿ ಸ್ವಾಗತಿಸಿ ನಿರೂಪಿಸಿದರು.