ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನವೆಂಬರ್ 28ರಂದು ಏಡ್ಸ್ ಜಾಗೃತಿ ಕಾರ್ಯಕ್ರಮ ಜರಗಿತು.
ಉಡುಪಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್.ಐ.ವಿ ಹಾಗು ಏಡ್ಸ್ ನಿಯಂತ್ರಣ ಘಟಕದ ಸಂಯೋಜಕರಾದ ಶ್ರೀ ಮಹಾಬಲೇಶ್ವರ ಬಿ.ಎಂ ರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಏಡ್ಸ್ ಹರಡುವ ವಿಧಾನ ಮತ್ತು ನಿಯಂತ್ರಣದ ಕ್ರಮಗಳ ಕುರಿತಾಗಿ ಅವರು ವಿವರಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷರಾಗಿದ್ದರು.
ಎನ್ ಎಸ್ ಎಸ್ ನ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್ ಸ್ವಾಗತಿಸಿದರು.
ಸಹ ಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ವಂದನೆಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.