ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ Harmfull Effects of Drugs, Tobbacco & Alcohol ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ದ್ವಿತೀಯ ಬಿಬಿಎ ವಿದ್ಯಾರ್ಥಿನಿಯರಾದ ಅಪೇಕ್ಷ ಭಟ್ ಪ್ರಥಮ, ಸಿಂಚನ ದ್ವಿತೀಯ, ನೇಹಾ ತೃತೀಯ ಬಹುಮಾನವನ್ನು ಕಾರ್ಯಕ್ರಮದ ಅಭ್ಯಾಗತರದ ಸ್ಪಂದನಾ ವಿಶೇಷ ಮಕ್ಕಳ ಶಾಲೆಯ ಸಂಸ್ಥಾಪಕರಾದ ಶ್ರೀ ಜನಾರ್ದನ ಎಂ ವಿತರಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷರಾಗಿದ್ದರು.
ರಾಷ್ಟ್ರೀಯ ಸೇವಾ ಯೋಜನ ಅಧಿಕಾರಿ ಶ್ರೀ ರಾಜೇಶ್ ಕುಮಾರ್ ಸ್ವಾಗತಿಸಿದರು, ಸಹ ಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ವಂದಿಸಿದರು, ರಾಘವೇಂದ್ರ ಜಿ ಜಿ ಕಾರ್ಯಕ್ರಮ ನಿರೂಪಿಸಿದರು.