ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 26 ರಂದು ವೃತ್ತಿ ಮಾರ್ಗದರ್ಶನ ಘಟಕದ ವತಿಯಿಂದ ಅಂತಿಮ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಕುರಿತಾಗಿ ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಸಹಾಯಕ ಪ್ರಾಧ್ಯಾಪಕರುಗಳಾದ ಪ್ರೊ. ರಮೇಶ್ ಕೆ. ಜಿ ಮತ್ತು ಪ್ರೊ. ಪದ್ಮನಾಭ ಪಿ ವಿದ್ಯಾರ್ಥಿಗಳಿಗೆ ಪಿಜಿ ಸಿಇಟಿ, ಸಾಮಾನ್ಯ ಪ್ರವೇಶ ಪರೀಕ್ಷೆ, ಬ್ಯಾಂಕಿಂಗ್ ಪರೀಕ್ಷೆ, ಸಂದರ್ಶನ ಎದುರಿಸುವ ಬಗ್ಗೆ ಮಾಹಿತಿ ನೀಡಿದರು.
ಹಳೆ ವಿದ್ಯಾರ್ಥಿ ಹಾಗೂ ಭಾರತಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ಇದರ ನಿರ್ದೇಶಕ ಶ್ರೀ ಗಿರೀಶ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷರಾಗಿದ್ದರು.
ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಶ್ರೀ ಹರಿಕೇಶವ್ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು.